ಬೆಟ್ಟಿಂಗ್ ದಂಧೆ ಆರೋಪಿ ಸೆರೆ

ಬೆಂಗಳೂರು,ಏ.೧೮-ಐಪಿಎಲ್ ಕ್ರಿಕೆಟ್ ಆರಂಭವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆ ಮೇಲೆ ನಿಗಾ ವಹಿಸಿರುವ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನ ಬಂಧಿಸಲಾಗಿದೆ.
ಬೆಟ್ಟಿಂಗ್‌ನಲ್ಲಿ ತೊಡಗಿದ್ದ ದೀಪಕ್ ಬಂಧಿತ ಆರೋಪಿಯಾಗಿದ್ದಾನೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಐಪಿಎಲ್ ಮ್ಯಾಚ್ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ, ಚೈನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಪಂದ್ಯದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ.ಲೋಟಸ್ ಬುಕ್ ೯ ಎಂಬ ಆಯಪ್‌ನಲ್ಲಿ ಈತ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ೨ ಲಕ್ಷ ನಗದು ಹಾಗೂ ಒಂದು ಮೊಬೈಲ್ ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದರು.