ಬೆಡ್ ಬುಕ್ಕಿಂಗ್​ ದಂಧೆ ಬಯಲು

ಬೆಂಗಳೂರು, ಮೇ 4- ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬೆಡ್ ಬುಕ್ಕಿಂಗ್​ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ ಗರುಡಾಚಾರ್, ಸತೀಶ್ ರೆಡ್ಡಿ ಇತರರು ಸೇರಿ ಬಯಲಿಗೆಳೆದಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಿತ್ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಇದಲ್ಲದೇ ಬೆಡ್​ ಬುಕಿಂಗ್​ ದಂಧೆಗೆ ಸಂಬಂಧಪಟ್ಟಂತೆ ಇನ್ನಿಬ್ಬರನ್ನು ಬಂಧಿಸಿರುವ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಈ ದಂಧೆಯಲ್ಲಿ ಪಾತ್ರವಹಿಸಿದ್ದಾರೆ ಎನ್ನಲಾದ ರೋಹಿತ್​ ಮತ್ತು ನೇತ್ರಾ ಎಂಬುವರನ್ನು ಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.
ಬಂಧಿತ ರೋಹಿತ್​ ಹಾಗೂ ನೇತ್ರಾರನ್ನು ಪೊಲೀಸರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದು, ಇವರ ಜತೆ ಶಾಮೀಲಾಗಿರುವ ಇನ್ನಿತರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.