ನವದೆಹಲಿ, ಜು. ೨೦- ಮಣಿಪುರದಲ್ಲಿ ಹಿಂಸಾಚಾರದಲ್ಲಿ ಮುಂದುವರಿದಿದ್ದು ಇಬ್ಬರು ಮಹಿಳೆಯರನ್ನು ಬೆತ್ತಲಾಗಿ ಮೆರವಣಿಗೆ ಮಾಡಿರುವ ಘಟನೆ ಕುರಿತಂತೆ ತೀವ್ರ ಬೇಸರ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಕೂಡಲೇ ಘಟನೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ದೇಶದಲ್ಲಿ ಇಂತಹ ಘಟನೆಗಳು ಸ್ವೀಕಾರವಲ್ಲ. ಈ ಘಟನೆಯಿಂದ ದೇಶದ ವಿಚಲಿತಗೊಂಡಿರುವುದಾಗಿ ಅಭಿಪ್ರಾಯ ಪಟ್ಟಿದ್ದಾರೆ.ಮಣಿಪುರ ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕ್ರಮಕೈಗೊಳ್ಳನೇಕು. ಹಾಗೂ ಯಾವ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸುಪ್ರೀಂಕೋರ್ಟಿಗೆ ಮಾಹಿತಿ ನೀಡುವಂತೆ ಕೇಂದ್ರಕ್ಕೆ ಸೂಚಿಸಲಾಗಿದೆ. ಈ ಘಟನೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ ನೀಡಲಾಗಿದೆ. ಕೇಂದ್ರಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ದರೆ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾ. ಮೂರ್ತಿ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಕೇಂದ್ರಕ್ಕೆ ಎಚ್ಚರಿಕೆ ನೀಡಿದೆ.ಮೇ ೪ ರಂದು ಮಣಿಪುರದ ಬೆಟ್ಟಗಳ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಆ ಘಟನೆಯ ನಂತರ ಸಂಘರ್ಷ ನಡೆಯುತ್ತಿರುವ ಸಮುದಾಯದ ಇಬ್ಬರು ಮಹಿಳೆಯರನ್ನು ಮತ್ತೊಂದು ಸಮುದಾಯದ ಕೆಲ ಪುರುಷರು ಬೆತ್ತಲಾಗಿ ಮೆರಣಿಗೆ ಮಾಡುತ್ತಿರುವ ವಿಡಿಯೋ ಹರಿದಾಡಿತ್ತು.