ಮಣಿಪುರ, ಜು.೨೦-ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲುಗೊಳಿಸಿ ಮೆರವಣಿಗೆ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದರೂ ಯಾರನ್ನೂ ಬಂಧಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಬೇಸರ ವ್ಯಕ್ತಪಡಿಸಿದ್ದಾರೆ.
ವಿಡಿಯೋವನ್ನು ನೋಡಿದ ನಂತರ ನನಗೆ ನಿದ್ದೆ ಬರುತ್ತಿಲ್ಲ. ಮಣಿಪುರದಲ್ಲಿ ಹಿಂಸಾಚಾರವನ್ನು ನಿಲ್ಲಿಸಬೇಕು ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಪತ್ರ ಬರೆಯುವುದಾಗಿ ಸ್ವಾತಿ ಮಲಿವಾಲ್ ಹೇಳಿದ್ದಾರೆ.
ಇನ್ನೂ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆ ಖಂಡಿಸಿ ಪ್ರತಿಯೊಬ್ಬರು ಟ್ವೀಟ್ ಮಾಡುತ್ತಿದ್ದಾರೆ.
ಈಗಾಗಲೇ ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಘಟನೆ ಖಂಡಿಸಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.