ಬೆತ್ತಲೆ ವಿಡಿಯೋ ಸಿಬಿಐನಿಂದ ಎಫ್‌ಐಆರ್

ನವದೆಹಲಿ,ಜು.೨೯- ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ವಿಡಿಯೋ ವೈರಲ್ ಪ್ರಕರಣರಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿ ತನಿಖೆ ಚುರುಕುಗೊಳಿಸಿದೆ.
ಮೇ ತಿಂಗಳಲ್ಲಿ ಮಣಿಪುರದಲ್ಲಿ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಮೇ ೪ ರಂದು ನಡೆದ ಈ ಘಟನೆಯ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು, ಘಟನೆಯ ಬಗ್ಗೆ ಕೋಲಾಹಲಕ್ಕೆ ಕಾರಣವಾಗಿದೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕು ಎಂದು ಇಂಡಿಯಾ ಮೈತ್ರಿಕೂಟದ ಸದಸ್ಯರು ಪಟ್ಟುಹಿಡಿದಿದ್ದಾರೆ. ಅಲ್ಲದೆ ಪ್ರಧಾನಿ ವಿರುದ್ದ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.ಪ್ರತಿ ಪಕ್ಷಗಳು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದರೂ ಪ್ರಧಾನಿ ಈ ವಿಷಯದಲ್ಲಿ ತುಟಿ ಬಿಚ್ಚಿಲ್ಲ. ಹೀಗಾಗಿ ಪ್ರಕಣ ತೀವ್ರ ಕೂತಹಲ ಕೆರಳಿಸಿದ.ಎಈ ನಡುವೆ ಕೇಂದ್ರ ಸರ್ಕಾರ ಪ್ರಕಣವನ್ನು ಸಿಬಿಐಗೆ ವಹಿಸಿತ್ತು. ತನಿಖೆ ಪ್ರಾರಂಭಿಸಿರುವ ಸಿಬಿಐ ಬೆತ್ತಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲು ಮಾಡಿದೆ.