
ಬೀದರ್:ಮಾ.25: ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಡಾ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೇಷಾಲಿಟಿ ಸಹಕಾರ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಯಿತು.
ಡಾ. ಸಂತೋಷ ಅಣ್ಣೆಪ್ಪನೋರ, ಡಾ. ವಿನೋದ ಭೋರಾಳೆ ಅವರು ಆರೋಗ್ಯ ತಪಾಸಣೆ ನಡೆಸಿದರು. ಆರೋಗ್ಯ ರಕ್ಷಣೆಗೆ ನೆರವಾಗುವ ಜೀವನಕ್ರಮ ಕುರಿತು ಮಾಹಿತಿ ನೀಡಿದರು. ಪೌಷ್ಠಿಕ ಆಹಾರ ಸೇವಿಸಬೇಕು, ನಿಯಮಿತವಾಗಿ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದರು.
ಶಿಬಿರದಲ್ಲಿ 95 ಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ ಜರುಗಿತು.