ಬೆಲವತ್ತ ಗ್ರಾ ಅಭಿವೃದ್ಧಿಗೆ ಕ್ರಮ

ಸಂಜೆವಾಣಿ ನ್ಯೂಸ್
ಮೈಸೂರು:ಮಾ.17:- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೆಲವತ್ತ ಗ್ರಾಮದಲ್ಲಿ 5 ಕೋಟಿ ರೂ. ಕಾಮಗಾರಿಗೆ ಚಾಲನೆ ನೀಡಿರುವುದಾಗಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಈಗಾಗಲೇ ಒಳಚರಂಡಿ, ಚರಂಡಿ, ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ, ಬಾಕಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು 5ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದ್ದು, ಇಂದು ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಲವತ್ತ ಗ್ರಾಮವು ಮೈಸೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಗ್ರಾಮವಾಗಿದೆ, ಗ್ರಾಮದ ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಮಾರಂಭದಲ್ಲಿ ಜೆ.ಡಿ.ಎಸ್ ಅಧ್ಯಕ್ಷ ಹೆಚ್.ಸಿ.ರಾಜು, ಜಿ.ಪಂ. ಮಾಜಿ ಸದಸ್ಯ ನಾಗನಹಳ್ಳಿ ದಿನೇಶ್, ತಾ.ಪಂ. ಮಾಜಿ ಸದಸ್ಯ ಬೆಲವತ್ತ ಕುಮಾರ್, ಸಿದ್ದಲಿಂಗಪುರ ಗ್ರಾ.ಪಂ. ಅಧ್ಯಕ್ಷ ಮಾದೇಶ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.