ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ದೇವದುರ್ಗ,ಮಾ.೦೪- ಕೇಂದ್ರ ಸರ್ಕಾರ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಮಾಡಿರುವ ಕ್ರಮ ಖಂಡಿಸಿ ಪಟ್ಟಣದ ಜಹಿರುದ್ದೀನ್ ಪಾಷಾ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ್ ನಾಯಕ ಮಾತನಾಡಿ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆದಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ೫೦ರೂ. ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ೩೫೦ರೂ. ಹೆಚ್ಚಳ ಮಾಡಿ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಸಿಲೆಂಡರ್ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.
ನಂತರ ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್‌ಗೆ ಮನವಿ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್, ಶ್ರೀದೇವಿ ರಾಜಶೇಖರ ನಾಯಕ, ಪುರಸಭೆ ಅಧ್ಯಕ್ಷ ಶರಣಗೌಡ ಬಕ್ರಿ, ಶರಣಗೌಡ ಕಮತಗಿ, ರಂಗಪ್ಪ ಗೋಸಲ್ ಇತರರಿದ್ದರು.