
ರಾಯಚೂರು, ಮಾ.೪- ಸಿಲಿಂಡರ್ ಬೆಲೆ ಸೇರಿದಂತೆ ದಿನನಿತ್ಯ ಬಳಸುವ ಅಗತ್ಯ ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಸಿಲಿಂಡರ್ ಇಟ್ಟು
ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆಯಿಂದ ದೇಶದ ಜನಸಾಮಾನ್ಯರು ತೆರಿಗೆ ಪಾವತಿಸದೇ ತತ್ತರಿಸುತ್ತಿದ್ದಾರೆ ಬಡವರ ಮೇಲೆ ಹೊರೆಸಿರುವ ಸಿಲಿಂಡರ್ ಮತ್ತು ಜಿಎಸ್ ಟಿ ತೆರಿಗೆಯನ್ನು ಕೂಡಲೇ ರದ್ದುಪಡಿಸಬೇಕೆಂದು ಒತ್ತಾಯಿಸಿದರು.
೪೦% ಕಮಿಷನ್ ಸರಕಾರ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ಸಿಲಿಂಡರ್ ಬೆಲೆ ಮತ್ತು ಜಿಎಸ್ ಟಿ ತೆರಿಗೆ ರದ್ದುಪಡಿಸಬೇಕೆಂದು ಒತ್ತಾಯಿಸಿದರು.
ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದ್ದಾರೆ. ಗೃಹಬಳಕೆ ಸಿಲಿಂಡರ್ ಬೆಲೆ ೧೦೫೦ ದರ ನಿಗದಿಯಾಗಿತ್ತು. ಎಲ್‌ಪಿಜಿ ಸಿಲಿಂಡರ್‌ನ ಬೆಲೆ ೫೦ ರೂ. ಏರಿಕೆಯಾಗಿದೆ. ಈ ಪರಿಷ್ಕರಣೆಯೊಂದಿಗೆ ಪ್ರತಿ ಸಿಲಿಂಡರ್‌ನ ಬೆಲೆ ೧೧೦೩ ರೂ ಏರಿಕೆ ಆಗಿದೆ.
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಜೊತೆ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕೂಡ ಹೆಚ್ಚಳ ಮಾಡಲಾಗಿದೆ. ೧೯ ಕೆಜಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ೩೫೦.೫೦ ರೂ. ಏರಿಕೆಯಾಗಿದೆ, ಕಚ್ಚಾ ತೈಲ ಬೆಲೆ ಕುಸಿದರೂ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳನ್ನು ಮೇಲಿಂದ ಮೇಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ
ನಾಗವೇಣಿ, ಶಶಿಕಲಾ ಭೀಮರಾಯ, ರಾಜೇಶ್ವರಿ,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ರೆಡ್ಡಿ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಜಿ. ಸುರೇಶ, ಕೆ. ಇ ಕುಮಾರ, ವಿ. ಎಸ್ ಯಲ್ಲಪ್ಪ, ತಿಮ್ಮಪ್ಪ ಸ್ವಾಮಿ ಸೇರಿದಂತೆ ಉಪಸ್ಥಿತರಿದ್ದರು.