ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ರಾಯಚೂರು, ಮಾ.೦೨- ಗೃಹ ಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರ ಅಂಬೇಡ್ಕರ್ ವೃತ್ತದಲ್ಲಿ ಅಡುಗೆ ಅನಿಲ ಸಿಲಿಂಡರ್ ಹೊತ್ತುಕೊಂಡು ಮೆರವಣಿಗೆ ನಡೆಸಿ ಚಹಾ ಮಾಡುವದರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದ್ದಾರೆ. ಗೃಹಬಳಕೆ ಸಿಲಿಂಡರ್ ಬೆಲೆ ೧೦೫೦ ದರ ನಿಗದಿಯಾಗಿತ್ತು. ಎಲ್‌ಪಿಜಿ ಸಿಲಿಂಡರ್‌ನ ಬೆಲೆ ೫೦ ರೂ. ಏರಿಕೆಯಾಗಿದೆ. ಈ ಪರಿಷ್ಕರಣೆಯೊಂದಿಗೆ ಪ್ರತಿ ಸಿಲಿಂಡರ್‌ನ ಬೆಲೆ ೧೧೦೩ ರೂ ಏರಿಕೆ ಆಗಿದೆ.
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಜೊತೆ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕೂಡ ಹೆಚ್ಚಳ ಮಾಡಲಾಗಿದೆ. ೧೯ ಕೆಜಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ೩೫೦.೫೦ ರೂ. ಏರಿಕೆಯಾಗಿದೆ, ಈ ಹೆಚ್ಚಳದೊಂದಿಗೆ ೧೯ ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ ೨೧೧೯.೫೦ ಆಗಿದ್ದು ಇತಿಹಾಸದಲ್ಲೇ ಖಂಡನೀಯ ಮಾರುಕಟ್ಟೆ ಆಗುತ್ತಿದೆ ಎಂದು ಕೇಂದ್ರ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಭ್ರಷ್ಟಾ ಸರ್ಕಾರ ಬಡವರು ರೈತರು ಮತ್ತು ಜನಸಾಮಾನ್ಯರ ಬದುಕು ಕಸಿದು ಅವರ ಮೇಲೆ ಬರೆ ಎಲೆಯುತ್ತಿದೆ. ಗುಜರಾತಿನ ೨೧ ಜನರ ೧೨ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮೀಣ ಪ್ರದೇಶದಲ್ಲೇ ಪುರಾತನದಿಂದ ರೂಡಿಯಲ್ಲಿದ್ದ ಗ್ರಾಮೀಣ ಜನರು ಸೌದೆ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದರು.
ಈ ಸಂದರ್ಭದಲ್ಲಿ ವಿನಯ್ ಕುಮಾರ,
ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.