ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಧಾರವಾಡ,ಜು19 : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ಬೆಲೆ ಏರಿಕೆ ನೀತಿ ಕೈಬಿಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ರಾಜ್ಯ ವ್ಯಾಪ್ತಿಯಲ್ಲಿ ಇನ್ನಷ್ಟು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತ ಕೊನೆಗೊಳ್ಳುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಎಂದು ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಮಿತಿಯ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್, ಅರವಿಂದ ಏಗನಗೌಡ, ಈಶ್ವರ ಶಿವಳ್ಳಿ, ಮಂಜುನಾಥ ನಡಟ್ಟಿ, ಆನಂದಸಿಂಗನಾಥ್, ವಿನಯ್ ಬಾಬರ್, ನಿರ್ಮಲಾ ಹೊಂಗಲ, ಆನಂದ ಸಿಂಘನಾಥ, ರೇಣುಕಾ ಕಳ್ಳಿಮನಿ ಸೇರಿದಂತೆ ಹಲವರು ಇದ್ದರು.