ಬೆಳಗಾವಿಯಲ್ಲಿ ಬೃಹತ್ ಲೋಕ ಅದಾಲತ್

ಬೆಳಗಾವಿ, ಡಿ 19-ನ್ಯಾಯಾಧೀಶರಾದ ಸಿ.ಎಂ.ಜೋಶಿ ಮತ್ತು ಪೆÇಲೀಸ್ ಕಮಿಷನರ್ ಡಾ.ಕೆ.ತ್ಯಾಗರಾಜನ್‍ರ ಸಮ್ಮುಖದಲ್ಲಿ ಇಂದು ಬೆಳಗಾವಿಯಲ್ಲಿ ಬೃಹತ್ ಲೋಕ ಅದಾಲತ್‍ನ್ನು ಆನ್‍ಲೈನ್ ಮೂಲಕ ನಡೆಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಪೆÇಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಸಂಘ ಬೆಳಗಾವಿ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಹೊಸ ನ್ಯಾಯಾಲಯಗಳ ಸಂಕೀರ್ಣ ಎ.ಡಿ.ಆರ್.ಕಟ್ಟಡದಲ್ಲಿ ಬೃಹತ್ ಲೋಕ ಅದಾಲತ್‍ನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ನ್ಯಾಯಿಕ ಸಂಧಾನಕಾರರಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಎಂ.ಜೋಶಿ ಹಾಗೂ ಪೆÇಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಅವರು ಆಗಮಿಸಿದ್ದರು. ಈ ವೇಳೆ ಲೋಕ್ ಅದಾಲತ್‍ನಲ್ಲಿ ಕಕ್ಷಿದಾರರು ಮತ್ತು ಸಾಕ್ಷಿದಾರರ ಸಮ್ಮುಖದಲ್ಲಿ ಹಲವು ಪ್ರಕರಣಗಳನ್ನು ಬಗೆಹರಿಸಲಾಯಿತು.
ಕಳೆದ ಅನೇಕ ದಿನಗಳಿಂದ ತ್ವರಿತಗತಿಯಲ್ಲಿ ನ್ಯಾಯಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕು ಎಂಬ ಉದ್ದೇಶದಿಂದ ಲೋಕ್ ಅದಾಲತ್‍ನ್ನು ನಡೆಸಲಾಗುತ್ತಿದೆ. ಈ ಮೂಲಕ ಎರಡೂ ಪಾರ್ಟಿಯವರನ್ನು ರಾಜಿ, ಸಂಧಾನದ ಮೂಲಕ ನ್ಯಾಯಾಧೀಶರು ಸಾಕಷ್ಟು ಪ್ರಕರಣಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ಇದಾದ ಬಳಿಕ ನ್ಯಾಯಿಕ ಸಂಧಾನಕಾರರಾಗಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎಮ್.ಎಚ್.ಅಣ್ಣಯ್ಯನವರ ಹಾಗೂ ಸಂಧಾನಕಾರರಾಗಿ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.