
ಬೆಳಗಾವಿ, ಏ.5: ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್‍ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್‍ಗೇಟ್‍ನಲ್ಲಿ ಇಂದು ನಸುಕಿನ ಜಾವ ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತಂತೆ ಓರ್ವನನ್ನು ಬಂಧಿಸಲಾಗಿದೆ.
ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ (ಏಂ 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‍ಎಸ್‍ಟಿ ಹಾಗೂ ಪೆÇಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ.
ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದ್ದು, ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪೆÇಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೆÇಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಶ್ಲ್ಯಾಘಿಸಿದ್ದಾರೆ.