ಬೆಳಗಾವಿ ನಮ್ಮದು: ಮಹಾರಾಷ್ಟ್ರಕ್ಕೆ ಎಚ್ ಡಿಕೆ ತಿರುಗೇಟು

ಬೆಂಗಳೂರು, ಮಾ. 14-ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,
ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿಕೆಗೆ ಅಕ್ರೋಶ‌ ವ್ಯಕ್ತಪಡಿಸಿದ್ದಾರೆ.
ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು ಎಂದು ಹೇಳಿದ್ದಾರೆ.