ಬೆಳಗಾವಿ ಲೋಕಸಭಾ ಉಪ ಸಮರ: ಕೈ ನಿಂದ ಇಬ್ಬರ ಹೆಸರು ಅಂತಿಮ

ಬೆಳಗಾವಿ, ಡಿ 29- ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಇಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಮೂರು ಹೆಸರುಗಳನ್ನು ಸೂಚಿಸಲಾಗಿತ್ತಾದರೂ ಅಂತಿಮವಾಗಿ ಇಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಅಭ್ಯರ್ಥಿಗಳ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದರು.
ಬೆಳಗಾವಿ ಪಾಲಿಕೆ ಎದುರು ಕನ್ನಡ ಬಾವುಟ ಹಾರಿಸಿರುವ ಬಗ್ಗೆ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು.‌ಅನವಶ್ಯವಾಗಿ ಸಮಸ್ಯೆ ಹುಟ್ಟುಹಾಕದೆ ಪರಿಹರಿಸಬೇಕು ಎಂದು ಹೇಳಿದರು.
ಉಪ ಸಭಾಪತಿ ಧರ್ಮೇಗೌಡ ಅವರು ಈ ಆತ್ಮಹತ್ಯೆ ಯಂತಹ ನಿರ್ಧಾರಕ್ಕೆ ಕೈ ಹಾಕಬಾರದಿತ್ತು. ಆತ್ಮಹತ್ಯೆ ಪ್ರಕರಣವನ್ನು ವಿಧಾನಪರಿಷತ್‌ನಲ್ಲಿ ನಡೆದ ಗಲಾಟೆಗೆ ಹೋಲಿಕೆ‌ ಮಾಡುವುದು ಸರಿಯಲ್ಲ.
ಅದಕ್ಕೂ ಆತ್ಮಹತ್ಯೆಗೂ ಸಂಬಂಧವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಜನ ನಾಯಕರು ಹೀಗೆ ಮಾಡಿದರೆ ಜನಸಾಮಾನ್ಯರ ಮೇಲೆ ಖಂಡಿತಾ ಪರಿಣಾಮ ಬೀರುತ್ತದೆ ಎಂದರು.