ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ; ಪ್ರಗತಿ ಪರಿಶೀಲನೆ


ಬೆಳಗಾವಿ, ಜು.3: ವ್ಯಾಕ್ಸಿನ್ ಡಿಪೆÇೀ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.
ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವ್ಯಾಕ್ಸಿನ್ ಡಿಪೆÇೀದಲ್ಲಿನ ಕಾಮಗಾರಿಗೆ ಅನುಮತಿ ಪಡೆದುಕೊಂಡಿರುವ ಹಾಗೂ ಕಾಮಗಾರಿ ಪೂರ್ಣಗೊಂಡ ಬಳಿಕ ಸಮರ್ಪಕ ನಿರ್ವಹಣೆಯ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಬೇಕು ಎಂದರು.

ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಪರವಾನಿಗೆ ನೀಡಿರುವುದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಹೆರಿಟೇಜ್ ಪಾರ್ಕ್ ಅಭಿವೃದ್ಧಿಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಈ ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಹೇಳಿದರು.
ಒಂದು ವೇಳೆ ಲಿಖಿತವಾಗಿ ಪರವಾನಿಗೆ ನೀಡಿದ್ದರೆ ಅದರ ಬಗ್ಗೆ ಅಧಿಕಾರಿಗಳು ವಿವರಣೆ ನೀಡಬೇಕು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.