
ಹನುಮಸಾಗರ:ಆ.30: ಸಮೀಪದ ಯರಗೇರಾ ಗ್ರಾಮಕ್ಕೆ ಮಂಗಳವಾರ ಜಿಲ್ಲಾ ಅಧಿಕಾರಿ ನಲಿನ್ ಅತುಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಬೇಟಿ ನೀಡಿ ಬೆಳೆ ಸಮಿಕ್ಷೆ ನಡೆಸಿತ್ತು.
ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಅದಕ್ಕಾಗಿ ಸರ್ಕಾರ ಗ್ರೌಂಡ್ ಟ್ರೂಥಿಂಗ್ ಸರ್ವೇ ಮಾಡುತ್ತಿದ್ದು, ಇದರಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದು, ಅನೇಕ ಗ್ರಾಮಗಳಲ್ಲಿ ರಾಂಡಮ್ ಡಿಜಿಟಲ್ ಸರ್ವೇ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಕೊಡಲಾಗುತ್ತದೆ. ಸರ್ಕಾರ ಈ ವರದಿಯನ್ನು ಆಧರಿಸಿ ಬರ ಘೋಷಣೆ ಮಾಡಲಿದೆ ಎಂದರು.
ತಹಸೀಲ್ದಾರ್ ಶೃತಿ ಎಂ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ, ಕಂದಾಯ ನಿರೀಕ್ಷಕರಾದ ಅಬ್ದುಲ್ ರಜಾಕ ಮದ್ದಲಗಟ್ಟಿ, ಗ್ರಾಮ ಲೆಕ್ಕಾಧಿಕಾರಿ ರವಿ ಮದನ ಇತರರಿದ್ದರು.