ಬೆಳೆ ಸಮೀಕ್ಷೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ

ಬ್ಯಾಡಗಿ,ಜು.31: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು. ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅಗತ್ಯವಾಗಿದೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ರೈತರ ಬೆಳೆ ಸಮೀಕ್ಷೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಜಾರಿಯಲ್ಲಿರುವ ಮೊಬೈಲ್ ಫೆÇೀನ್ ಬೆಳೆ ಸಮೀಕ್ಷಾ ಕಾರ್ಯ ಈ ವರ್ಷವೂ ಚಾಲನೆಯಲ್ಲಿದ್ದು, ರೈತರು ತಮ್ಮ ಹೊಲದಲ್ಲಿ ಬೆಳೆದಿರುವ ಬೆಳೆಯು ಮಳೆ ಕೊರತೆ ಹಾಗೂ ಅತಿವೃಷ್ಟಿಯಿಂದ ನಷ್ಟವಾದರೆ ಸರಕಾರದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ. ಕಾರಣ ಎಲ್ಲ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಯನ್ನು ತಮ್ಮ ಮೊಬೈಲ್ ಫೆÇೀನ್ ಮೂಲಕ ಸಮೀಕ್ಷೆ ಮಾಡಿಕೊಳ್ಳಿ ಅಥವಾ ಖಾಸಗಿ ವ್ಯಕ್ತಿಗಳ ಮೂಲಕ ನಡೆಸುವ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು ಸಮೀಕ್ಷೆ ನಡೆಸಿ ಭವಿಷ್ಯದಲ್ಲಿ ಸರ್ಕಾರದ ಸವಲತ್ತಗಳನ್ನು ಪಡೆದುಕೊಳ್ಳಲು ಮುಂದಾಗಬೇಕೆಂದು ರೈತರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಸರೋಜಾ ಉಳ್ಳಾಗಡ್ಡಿ, ಉಪಾಧ್ಯಕ್ಷೆ ಗಾಯತ್ರಿ ರಾಯ್ಕರ, ಗಿರಿಜಮ್ಮ ಪಟ್ಟಣಶೆಟ್ಟಿ, ಗಂಗಣ್ಣ ಎಲಿ, ಬಸವರಾಜ ಸಂಕಣ್ಣನವರ, ಶಿವಬಸಪ್ಪ ಕುಳೇನೂರ, ಹಾಲೇಶ ಜಾಧವ, ಈರಣ್ಣ ಚೌಟಿ, ನಿಂಗಣ್ಣ ಕುಮ್ಮೂರ, ಸಹಾಯಕ ಕೃಷಿ ನಿರ್ದೇಶಕ ಎ.ಡಿ.ವೀರಭದ್ರಪ್ಪ, ಕೃಷಿ ಅಧಿಕಾರಿ ಎಸ್.ಪಿ.ಮರಬಸಣ್ಣನವರ, ತಾಂತ್ರಿಕ ಕೃಷಿ ಅಧಿಕಾರಿ ಕೆ.ಬಿ.ಹಿರೇಹಾಳ, ಆತ್ಮಾ ಸಂಯೋಜಕ ಚಂದ್ರಶೇಖರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.