ಹುಬ್ಬಳ್ಳಿ,ಅ.3:ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ಬೆಳೆಸಾಲದ ಮಿತಿಯನ್ನು ಮೂರು ಲಕ್ಷದಿಂದ 5 ಲಕ್ಷದವರೆಗೆ ಏರಿಸುವ ಬಗ್ಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಅದರಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲ ತಾಂಡವಾಡುತ್ತಿದ್ದು, ಈ ಹಿಂದೆ ಭಾರತೀಯ ಜನತಾ ಪಕ್ಷದ ಸರ್ಕಾರ ಆಡಳಿತದಲ್ಲಿದ್ದಾಗ ರೈತರಿಗೆ ಅನುಕೂಲ ವಾಗಲೆಂದು ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿಗಳನ್ನು ವಿತರಿಸಲು ಯೋಜನೆ ಜಾರಿಗೊಳಿಸಿದ್ದು ವಿಧಾನಸಭೆ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಿದ್ದು ತಕ್ಷಣ ರೈತರಿಗೆ ಕಾಂಗ್ರೆಸ್ ಪಕ್ಷದ ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿಗಳನ್ನು ಸಹಕಾರ ಸಂಘಗಳ ಮುಖಾಂತರ ವಿತರಿಸಿ ಪ್ರಸಕ್ತ ವರ್ಷದಲ್ಲಿ ರೈತರ ಪರಿಸ್ಥಿತಿ ಅತ್ಯಂತ ಕನಿಷ್ಠ ವಾಗಿದ್ದು ರೈತ ಪರವಾದಂತಹ ಯೋಜನೆಗಳನ್ನ ಹೆಚ್ಚು ಹೆಚ್ಚು ಕೊಟ್ಟು ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಧಾರವಾಡ ಜಿಲ್ಲಾ ಭಾರತೀಯ ಜನತಾ ಪಕ್ಷದ ರೈತ ಮೋರ್ಚ ಕಾರ್ಯದರ್ಶಿಗಳಾದ ದೇವರಾಜ್ ಬಸವರಾಜ ದಾಡಿಬಾವಿ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.