ಬೆಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳ ತಂಡ ಭೇಟಿ


ಹರಿಹರ.ನ .18;  ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಬೆಳೆ ಸೇರಿದಂತೆ ಮನೆಗಳು ನಾಶವಾಗಿವೆ. ಮನೆ -ಬೆಳೆ ಕಳೆದುಕೊಂಡ  ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕಿನ ಹೊಳೆಸಿರಿಗೇರೆ, ಜಿಗಳಿ, ಹುಲಿಗಿನಹೊಳೆ ,ಎಳೆಹೊಳೆ, ಧೂಳೆಹೊಳೆ ಇನ್ನೂ ಇತರೆ ಗ್ರಾಮಗಳಲ್ಲಿ ಬೆಳೆ ಹಾನಿ ಆದ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ  ಯಾವ ಗ್ರಾಮಗಳಲ್ಲಿ ಬೆಳೆ ಹಾನಿ ಆಗಿರುವುದರ ಬಗ್ಗೆ ಕೂಡಲೇ ಸಂಬಂಧಿಸಿದ ತಹಶೀಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ವರದಿಯನ್ನು ತಯಾರಿಸಿ ಕೂಡಲೇ  ರೈತರಿಗೆ ಆಗಿರುವ ಅನ್ಯಾಯಕ್ಕೆ ಪರಿಹಾರ ದೊರಕಿಸಿಕೊಡುವ ಕೆಲಸವನ್ನು ಮಾಡಬೇಕೆಂದು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು  ಈ ವೇಳೆ ಗ್ರೇಡ್ ತಹಶೀಲ್ದಾರ್2  ಶಶಿಧರ್, ರಾಜಸ್ವ ನಿರೀಕ್ಷಕ ಆನಂದ್ ,.ಉಪ ತಹಸೀಲ್ದಾರ್ ರವಿ, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮಸ್ಥರು ಇದ್ದರು.