ಬೆಳೆ ಹಾನಿ ಸಮೀಕ್ಷೆ ಕಾರ್ಯ: ಜಿಲ್ಲಾಧಿಕಾರಿ ಪರಿಶೀಲನೆ

ಚಿತ್ರದುರ್ಗ.ಡಿ.೧; ಜಿಲ್ಲೆಯಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಆಗಿದ್ದು, ಬೆಳೆ ಹಾನಿ ಸಮೀಕ್ಷಾ ಕಾರ್ಯವನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಪರಿಶೀಲನೆ ನಡೆಸಿದರು. ಚಳ್ಳಕೆರೆ ತಾಲ್ಲೂಕಿನ ಹಿರೇಹಳ್ಳಿ, ಚಿಕ್ಕಮ್ಮನಹಳ್ಳಿ ಹಾಗೂ ಬಾಲೇನಹಳ್ಳಿ ಗ್ರಾಮದ ವಿವಿಧ ಹೊಲಗಳಿಗೆ  ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷಾ ಕಾರ್ಯವನ್ನು ವೀಕ್ಷಿಸಿದರು. ಅಕಾಲಿಕ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಶೇಂಗಾ ಬೆಳೆ, ತೊಗರಿ ಹಾಗೂ ಕಡಲೆ ಬೆಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿದ್ದು, ಹಾನಿಗೊಳಗಾದ ಬೆಳೆಗಳ ಬಗ್ಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶಕುಮಾರ್, ಉಪನಿರ್ದೇಶಕರಾದ ಪ್ರಭಾಕರ್, ಹುಲಿರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.