ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಅಂಗಾರ, ಸಂಸದ ನಳಿನ್ ಭೇಟಿ

ಸುಳ್ಯ, ಮೇ ೨೭- ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಕೊರತೆಯನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವ ಅಂಗಾರ ಭರವಸೆ ನೀಡಿದರು
ಅವರು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ .ಸಂಸದ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. .ಈ ಸಂದರ್ಭದಲ್ಲಿ ತಹಸೀಲ್ದಾರ್ ಅನಿತಾಲಕ್ಷ್ಮೀ,ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್, ಬೆಳ್ಳಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಗ್ರಾಮ ಪಂಚಾಯಿತಿ ಸದಸ್ಯರು, ಉಪಸ್ಥಿತರಿದ್ದರು. ಆರೋಗ್ಯ ಕೇಂದ್ರದ ಸಮಸ್ಯೆಗಳ ಬಗ್ಗೆ ಸ್ಥಳೀಯರಾದ ಪ್ರೇಮಚಂದ್ರ ಮತ್ತಿತರರು ಸಚಿವರ ಗಮನಕ್ಕೆ ತಂದರು.