ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

ಸುಳ್ಯ, ನ.೧೫- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಕಂದ ಮಹಿಳಾ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಜಾಲ್ಸೂರು ಗ್ರಾಮ ಮಟ್ಟದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನವು ಅಡ್ಕಾರು ಅರಣ್ಯ ಇಲಾಖಾ ಸಭಾಂಗಣದಲ್ಲಿ ನಡೆಯಿತು.

ಕಿಶೋರಿ ಸಂಘದ ಅಧ್ಯಕ್ಷೆ ಕು.ಗೌತಮಿ ಬಿ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಷಾಪ್ರಸಾದ್ ರೈ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಕಂದ ಮಹಿಳಾ ಮಂಡಲ ಅಧ್ಯಕ್ಷೆ ಗೀತಾ ಗೋಪಿನಾಥ ಬೊಳುಬೈಲು ಉಪಸ್ಥಿತರಿದ್ದು, ಶುಭಹಾರೈಸಿದರು.

ಸುಮಾರು ೪೦ ಕಿಶೋರಿಯರು ಕಾರ್ಯಕ್ರಮದಲ್ಲಿ ಹಾಜರಿದ್ದು, ಬಾಲ್ಯವಿವಾಹ, ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ ಋತುಚಕ್ರ, ಸ್ವಚ್ಛತೆ, ಪೌಷ್ಠಿಕ ಆಹಾರದ ಬಗ್ಗೆ ಕಿಶೋರಿಯರಿಗೆ ಮಾಹಿತಿ ನೀಡಿದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ರವಿಕಲಾ, ಬೇಬಿ, ಸುಮಲತಾ , ಅಂ.ಕಾರ್ಯಕರ್ತೆ ಅಂಜಲಿ, ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಹಕರಿಸಿದರು. ಕದಿರಡ್ಕ ಅಂಗನವಾಡಿ ಕಾರ್ಯಕರ್ತೆ ಗಿರಿಜ ಸ್ವಾಗತಿಸಿ, ಪ್ರೇಮಕುಮಾರಿ ವಂದಿಸಿದರು, ನಿವೇದಿತಾ ಕಾರ್ಯಕ್ರಮ ನಿರೂಪಿಸಿದರು.