
ಅಥಣಿ : ಜ.13:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ವತಿಯಿಂದ ಆಯೋಜಿಲಾದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022-23 ರ ಕಾರ್ಯಕ್ರಮದಲ್ಲಿ ಪಟ್ಟಣದ ಉಲ್ಫತ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಸಮ್ರೀನ್ ಮುಲ್ಲಾ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಹೆಮ್ಮೆಯ ಸಾಧನೆ ಮಾಡಿದ್ದು,
ಈ ವಿದ್ಯಾರ್ಥಿನಿಗೆ ಮಾಜಿ ಡಿಸಿಎಂ ಹಾಗೂ ವಿಪ ಸದಸ್ಯ ಲಕ್ಷ್ಮಣ ಸವದಿ ಅವರು ತಮ್ಮ ನಿವಾಸದಲ್ಲಿ ಸನ್ಮಾನಿಸಿ ಶುಭ ಹಾರೈಸಿದರು,
ಈ ವೇಳೆ ಮಾತನಾಡಿದ ಅವರು
ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವಾಕಾಂಕ್ಷಿ ಯೋಜನೆಯಾದ ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಯೋಜನೆಯು ಯಶಸ್ವಿಯಾಗುತ್ತಿದೆ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಮಾತನ್ನು ನಿಜ ಮಾಡುತ್ತಿದ್ದು ಹೆಣ್ಣು ಮಕ್ಕಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಲಾಭ ನಡೆದುಕೊಂಡು ಇನ್ನೂ ಹೆಚ್ಚಿನ ಉನ್ನತ ಮಟ್ಟದಲ್ಲಿ ವಿಧ್ಯಾಭ್ಯಾಸ ಮಾಡಬೇಕು ಎಂದರು,
ಈ ವೇಳೆ ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಆಶೀಫ್ ತಾಂಬೋಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಶಿಕ್ಷಕರ ಸಂಘದ ಅಧ್ಯಕ್ಷ ಜಿ ಎಮ್ ಹಿರೇಮಠ, ಶಾಲೆಯ ಮುಖ್ಯೋಪಾಧ್ಯಾಯ ಮಹ್ಮದಅಜರ ಮುಲ್ಲಾ, ಸಲೀಮ್ ಮುಲ್ಲಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು,