ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯಮಟ್ಟದ ಪ್ರತಿಭಟನೆ

oppo_0


ಸಂಜೆವಾಣಿ ವಾರ್ತೆ
ಬಳ್ಳಾರಿ, ಜೂ.16: ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯಮಟ್ಟದ ಪ್ರತಿಭಟನಾ ಪ್ರದರ್ಶನ ಜರುಗಿತು.
ಈ ಸಂದರ್ಭದಲ್ಲಿ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು.
@12bc =  ಬೇಡಿಕೆಗಳು
2023-24 ರಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು 2024-25 ಶೈಕ್ಷಣಿಕ ವರ್ಷಕ್ಕೆ ನೇಮಕಾತಿ ಮಾಡಿಕೊಳ್ಳಬೇಕು, ಖಾಯಂ ಉಪನ್ಯಾಸಕರನ್ನು ನಿಯೋಜನೆ  ಮಾಡುವುದರ ಮೂಲಕ ಅತೀ ಕಡಿಮೆ ಸಂಬಳದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಅತಿಥಿ ಉಪನ್ಯಾಸಕರ ಜೀವನೋಪಾಯವನ್ನು ಕಸಿಯಬಾರದು, ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಬಿ.ಈಡಿ ಕಡ್ಡಾಯ ಮಾಡಿರುವುದು ಸರ್ಕಾರಿ ಅಧಿಸೂಚನೆಗಳ ಉಲ್ಲಂಘನೆಯಾಗಿದ್ದು, ಈ ಏಕಾಏಕಿಯಾಗಿ ನಿರ್ಧಾರವನ್ನು ಕೈಬಿಡಬೇಕು ಹಾಗೂ, ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇಕಡ 50% ಅಂಕಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜ್ ಅತಿಥಿ ಉಪನ್ಯಾಸಕರ ಸಂಘಟನೆಯ ಜಂಟಿ ಕಾರ್ಯದರ್ಶಿಗಳಾದ ನಾಗರತ್ನ ವಹಿಸಿದ್ದರು.
ಸಂಘಟನೆಯ ಸಲಹೆಗಾರರು ಹಾಗೂ ಶಿಕ್ಷಣ ಉಳಿಸಿ ಸಮಿತಿ , ರಾಜ್ಯ ಉಪಾಧ್ಯಕ್ಷರಾದ ವಿ ಎನ್ ರಾಜಶೇಖರ್ , ಸಂಘಟನೆಯ ರಾಜ್ಯ ಕಾರ್ಯದರ್ಶಿ ರಾಜೇಶ್ ಭಟ್
ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಸೋಮಶೇಖರಪ್ಪ, ಎಐಸಿಯುಟಿಎ  ಅಧ್ಯಕ್ಷರಾದ ಸುನಿತಾ , ಶಿಕ್ಷಣ ತಜ್ಞರಾದ ಮುನ್ಮೋಹನ್  ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಅತಿಥಿ ಉಪನ್ಯಾಸಕರು ಹೋರಾಟದಲ್ಲಿ ಭಾಗವಹಿಸಿದ್ದರು.