ಬೇಡಿಕೆ ಈಡೇರಿಕೆಗೆ ಸಮ್ಮತಿ: ಜೈನ ಸಮಾಜದಿಂದ ಅಭಿನಂದನೆ

ದಾವಣಗೆರೆ,ಮಾ.22: ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಿರುವ ಸಿಎಂ ಯಡಿಯೂರಪ್ಪ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಅವರನ್ನು ಶ್ರೀಸುಪಾರ್ಶ್ವನಾಥ ಜೈನ ಶ್ವೇತಾಂಬರ ಮೂರ್ತಿ ಪೂಜಕ್ ಸಂಘ ಅಭಿನಂದಿಸಿದೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಂಘದ ಅಧ್ಯಕ್ಷ ಮಹೇಂದ್ರಕುಮಾರ್ ಪಿ. ಜೈನ್, ಜೈನ ಸಮಾಜದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣ ಮಾಡಲು ಸರ್ಕಾರ ಸಮ್ಮತಿ ನೀಡಿದ್ದು, ಮೊದಲ ಹಂತದಲ್ಲಿ ರಾಜ್ಯದ ಹತ್ತು ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ ನಿರ್ಮಿಸುವುದಾಗಿ ಭರವಸೆ ನೀಡಿದ್ದು, ಮೊದಲ ಹಂತದಲ್ಲಿ ದಾವಣಗೆರೆಯಲ್ಲೂ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಜೈನ ಸಮಾಜದ ಸಾಧು, ಸಂತರು ಕಾಲ್ನಡಿಗೆಯ ನಂತರ ವಿಶ್ರಾಂತಿ ಪಡೆಯಲು ಅತ್ಯವಶ್ಯವಾಗಿರುವ ವಿಹಾರ ಧಾಮ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಜಿಲ್ಲಾ ಉಸ್ತುವಾರಿ, ಸಂಸದರು, ಶಾಸಕರು, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಎಫ್ ಪಠಾಣ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ, ಕೆ.ಎಂ.ಡಿ.ಸಿ ನಿರ್ದೇಶಕ ಗೌತಮ್ ಜೈನ್ ಅವರಿಗೆ ಜೈನ ಸಮಾಜ ಅಭಿನಂದಿಸಲಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ನರೇಂದ್ರ ಕುಮಾರ್ ಜೈನ್, ಸುರೇಶ್ ಜೈನ್, ಗೌತಮ್ ಜೈನ್ ಹಾಜರಿದ್ದರು.ಪೊಟೊ ಕ್ಯಾಪ್ಷನ್ ದಾವಣಗೆರೆಯ ಶ್ರೀಸುಪಾರ್ಶ್ವನಾಥ ಜೈನ ಶ್ವೇತಾಂಬರ ಮೂರ್ತಿ ಪೂಜಕ್ ಸಂಘದಿಂದಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.