ಬೇಷರತ್ತಾಗಿ ಕೃಷಿ ಕಾಯ್ದೆ ವಾಪಸ್ಸಿಗೆ ಸೋನಿಯಾ ಆಗ್ರಹ

ನವದೆಹಲಿ, ಡಿ.3- ಮೂರು ನೂತನ ಕೃಷಿ ಕಾಯ್ದೆಗಳನ್ನು ಬೇಷರತ್ತಾಗಿ ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಆಗ್ರಹಿಸಿದ್ದಾರೆ.
ಸ್ವಾತಂತ್ರ್ಯ ನಂತರ ಇದೇ ಪ್ರಥಮ ಬಾರಿಗೆ ರೈತರ‌ ಸಂಕಷ್ಟವನ್ನು ಗಮನಿಸಿದ ದಾರ್ಷ್ಟ್ಯ ಮನೋಭಾವದ ಸರ್ಕಾರ ಅಧಿಕಾರದಲ್ಲಿದೆ ಎಂದು ಕಿಡಿಕಾರಿದ್ದಾರೆ.
ಕಳೆದ 40 ದಿನಗಳಿಂದ ಕೇಂದ್ರದ‌‌ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಾಗ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಮೌನ ಮುರಿದಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಜನರ ಭಾವನೆಗಳನ್ನು ಗೌರವಿಸದ ಸರ್ಕಾರ ಮತ್ತು ಬಿಜೆಪಿ ನಾಯಕರು ದೀರ್ಘ ಕಾಲದವರೆಗೂ ಅಧಿಕಾರದಲ್ಲಿ ಉಳಿಯಲು‌ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ಪ್ರತಿಭಟನಾ ನಿರತ ರೈತರು ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ‌ ಮಂಡಿಯೂರುವುದಿಲ್ಲ ಎಂಬುದು‌ ಸ್ಪಷ್ಟವಾಗಿದೆ‌ ಎಂದು ಹೇಳಿದರು.
ಚಳಿ ಮತ್ತು ಮಳೆಯಲ್ಲಿ ಸಿಲುಕಿ ಅನ್ನದಾತರು ಸಾವನ್ನಪ್ಪುತ್ತಿದ್ದಾರೆ. ಈಗಲೂ ಕಾಲ ಮಿಂಚಿಲ್ಲ ಕೂಡಲೇ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ.