ಬೇಸಿಗೆಯಲ್ಲಿ ಮಧ್ಯಾಹ್ನದ ಬಿಸಿಯೂಟಸೌಲಭ್ಯ ಪಡೆಯಲು ಮನವಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.19: : ಬರಗಾಲ ಬಂದಿರುವುದರಿಂದ ಶಾಲೆಯ ಒಂದರಿಂದ ಹತ್ತನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಸರ್ಕಾರ ಮಧ್ಯಾಹ್ನ ಬಿಸಿಯೂಟವನ್ನು ಮುಂದುವರಿಸಿದೆ.ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಲೆಯ ಮುಖ್ಯ ಗುರು ರವಿಚೇಳ್ಳಗುರ್ಕಿ ಹೇಳಿದರು.
ತಾಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಜೊತೆ ಪ್ರಭಾತ್ ಪೇರಿ ಹಾಗೂ ಮನೆ ಮನೆ ಭೇಟಿ ನೀಡಿ ಪೋಷಕರಿಗೆ ಯೋಜನೆ ಮಹತ್ವ ತಿಳಿಸಿದರು.
ಊರಿನ ಪ್ರಮುಖ ಬೀದಿಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಿ, ಮಧ್ಯಾಹ್ನ ಬಿಸಿಯೂಟ ಸವಿಯಿರಿ  ಎಂಬ ಘೋಷಣೆ ಕೂಗಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಮೌನಿಕ ಬಿಸಿಯೂಟ ಕೇಂದ್ರಕ್ಕೆ ಭೇಟಿ ನೀಡಿ,ಮಕ್ಕಳೊಂದಿಗೆ ಪ್ರಭಾತ್ ಪೇರಿಯಲ್ಲಿ ಹೆಜ್ಜೆ ಹಾಕಿದರು.
ಊರಿನ ಹಿರಿಯರು ಪಾಲ್ಗೊಂಡಿದ್ದರು.