ಬೇಸಿಗೆಯ ಶಾಖದ ಹೊಡೆತದಿಂದ ತಪ್ಪಿಸಿಕೊಳ್ಳಲು ಮುಂಜಾಗೃತಾ ಕ್ರಮ ಅನುಸರಿಸಿ-ಡಿಸಿ

ರಾಯಚೂರು,ಏ.೦೩- ಜಿಲ್ಲೆಯಲ್ಲಿ ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಿ, ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ. ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು.
ಬೆಳಿಗ್ಗೆ ೧೧ ರಿಂದ ಸಂಜೆ ೦೪ ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ಲೋಕೋಸ್/(ಓ.ಆರ್.ಎಸ್) ನಂತಹ ದ್ರವ ಪದಾರ್ಥ ಗಳನ್ನು ಹೆಚ್ಚು ಉಪಯೋಗಿಸಿ. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ (use ತಿiಟಿಜoತಿ, shಚಿಜes, ಜಿಚಿಟಿಟಿiಟಿg ಚಿಟಿಜ ಛಿಡಿoss veಟಿಣiಟಚಿಣioಟಿ)
ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್‌ಗಳ ಮಧ್ಯ ಇಡಬಹುದು. ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.
ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು/ಓ.ಆರ್.ಎಸ್/ಮಜ್ಜಿಗೆಯಂತಹ ಪಾನೀಯಗಳನ್ನು ಬಳಸಬಹುದು. ನರೇಗಾ ಯೋಜನೆಯಡಿಯಲ್ಲಿ ಕೆಲಸ ನಡೆಯುತ್ತಿರುವ ಎಲ್ಲಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಹಾಗೂ ಓಆರ್‌ಎಸ್ ಪ್ಯಾಕೆಟ್ ಗಳ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಓಆರ್‌ಎಸ್ ಪ್ಯಾಕೆಟ್ ಗಳನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು.
ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡ ಕಾರ್ಯ ನಡೆಯುವ ಸ್ಥಳಗಳಲ್ಲಿ ಕೆಲಸಗಾರರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರಿನ ಹಾಗೂ ಓ.ಆರ್.ಎಸ್ ಪ್ಯಾಕೆಟ್ ಗಳ ವ್ಯವಸ್ಥೆಯನ್ನು ಕಡ್ಡಾಯವಾಗಿ ಎಲ್ಲಾ ಗುತ್ತಿಗೆದಾರರು ಮಾಡಬೇಕು. ಕೆಲಸಗಾರರು ಪ್ರತಿ ೨೦ ನಿಮಿಷಗಳಿಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿಯುವಂತೆ ಗಮನ ವಹಿಸಬೇಕು. ಕೆಲಸಗಾರರು ನೇರವಾದ ಸೂರ್ಯನ ಬೆಳಕಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು. ಕೆಲಸಗಾರರಿಗೆ ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನೂಕೂಲವಾಗುವಂತೆ ತಾತ್ಕಾಲಿಕ್ ಶೆಡ್‌ಗಳನ್ನು ನಿರ್ಮಿಸುವುದು ಸೇರಿದಂತೆ ಜಿಲ್ಲಾ ವಿಪತ್ತು ಪ್ರಾಧಿಕಾರದಿಂದ ನೀಡಲಾದ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.