ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಬಗೆಹರಿಸಲು ಜಿಲ್ಲಾ ಮಟ್ಟದ ಹೆಲ್ಫ್‍ಲೈನ್ ಪ್ರಾರಂಭ

ಕಲಬುರಗಿ,ಏ.03:ಕಲಬುರಗಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದಂತೆ ಪ್ರಸ್ತುತವಾಗಿ 2023-24 ನೇ ಸಾಲಿನ ಬೇಸಿಗೆ ಕಾಲದಲ್ಲಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕಲಬುರಗಿಯ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಹಾಯವಾಣಿ (ಹೆಲ್ಪ್‍ಲೈನ್) (ಊeಟಠಿ ಟiಟಿe) ಪ್ರಾರಂಭಿಸಲಾಗಿದೆ ಎಂದು ಕಲಬುರಗಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಈ ಸಹಾಯವಾಣಿಗೆ ಕಲಬುರಗಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಚೇರಿಯ ಲೆಕ್ಕ ಸಹಾಯಕರಾದ ವಸಂತಕುಮಾರ (ಮೊಬೈಲ್ ಸಂಖ್ಯೆ 7760009789) ಇವರನ್ನು ನೇಮಿಸಲಾಗಿದ್ದು, ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಈ ಸಹಾಯವಾಣಿಗೆ ಸಂಪರ್ಕಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.