ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ:ಎಸ್.ಆರ್ ಉಮಾಶಂಕರ್

ದಾವಣಗೆರೆ.ಏ.4; ಜಿಲ್ಲೆಯಲ್ಲಿ ಬೇಸಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಸೂಚನೆ ನೀಡಿದರು. ಜಿಲ್ಲಾಡಳಿತ ತುಂಗಾಭದ್ರ ಸಭಾಂಣದಲ್ಲಿ ಬೇಸಿಗೆ ಕುಡಿಯುವ ನೀರು ಹಾಗೂ ಇತರೆ ಪ್ರಗತಿ ಪರಿಶೀಲನೆ ನಡೆಸಿದ ಅವರು  ಚುನಾವಣಾ ಸಂದರ್ಭವಾಗಿರುವುದರಿಂದ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಹಾಗೂ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸಲಹೆ ನೀಡಿದರು.ಈಲ್ಲೆಯಲ್ಲಿ ಡಿಸೆಂಬರ್ ಉತ್ತಮ ಮಳೆಯಾಗಿದೆ ಕೆರೆ ಕಟ್ಟೆ ತುಂಬಿದೆ ಸದಸ್ಯದಲ್ಲಿ ನೀರಿನ ಅಭಾವ ಇರುವುದಿಲ್ಲ. ಆದ್ಯಾಗೂ ಮುನ್ನಚರಿಕೆಡ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪಗರಗತಿ ಪರಿಶೀಲನೆ ನಡೆಸಿದರು.   ಈ ವೇಳೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಹಿಟ್ನಾಳ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ, ಡಿ.ಡಿ.ಪಿ.ಐ ತಿಪ್ಪೇಶಪ್ಪ, ಜಿಲ್ಲಾ ಆರೋಗ್ಯಾಧಿಕಾರಿ, ಡಾ.ನಾಗರಾಜ, ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.