
ದಾವಣಗೆರೆ ಮಾ. 5; ಮಾರ್ಚ್ ತಿಂಗಳಿನಿಂದ ಬಿಸಿಲಿನ ಝಳವು ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ತೀವ್ರ ತಾಪಮಾನ ಉಂಟಾಗುವುದರಿಂದ ಆರೋಗ್ಯ ಸಮಸ್ಯೆಗಳಿಂದ ಎಲ್ಲರೂ ರಕ್ಷಣೆ ಪಡೆಯಬೇಕು ಎಂದು ಆರೋಗ್ಯ ಶಿಕ್ಷಣ ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ವೆಂಕಟೇಶ್ ಎಲ್.ಡಿ ಹೇಳಿದರು.ಕಕ್ಕರಗೊಳ್ಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 3 ರಂದು ನಡೆದ ಬೇಸಿಗೆ ದಿನಗಳಲ್ಲಿ ಆರೋಗ್ಯ ರಕ್ಷಣೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು ಬಿಸಿಲಿನಿಂದ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಹೆಚ್ಚಾಗಿ ನೀರು ಕುಡಿಯಬೇಕು. ಹಣ್ಣಿನ ರಸ, ಮಜ್ಜಿಗೆ, ಶರಬತ್ ಮತ್ತು ಲಸ್ಸಿಯನ್ನು ಕುಡಿಯುವುದು. ಸಾಧ್ಯವಾದಷ್ಟು ತೆಳುವಾದ ಹತ್ತಿಯ ಬಟ್ಟೆಗಳನ್ನು ಲಘು ಬಣ್ಣದ ಬಟ್ಟೆಗಳನ್ನು ಧರಿಸುವುದು. ಹೊರಗೆ ಹೋಗುವಾಗ ಛತ್ರಿ, ಟೋಪಿ ಮತ್ತು ಟವಲ್‍ಗಳನ್ನು ಬಳಸಬೇಕು ಎಂದರುಮಧ್ಯಾಹ್ನದ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸಬೇಕು ಅದರಲ್ಲೂ ರಕ್ತದ ಒತ್ತಡ, ಹೃದಯ ಸಮಸ್ಯೆ ಇರುವವರು,. ಗರ್ಭಿಣಿಯರು, 65 ವರ್ಷ ಮೇಲ್ಪಟ್ಟವರು ಮತ್ತು ಚಿಕ್ಕ ಮಕ್ಕಳು ಹೆಚ್ಚು ಜಾಗರೂಕತೆಯಿಂದಿರಲು ತಿಳಿಸಿದರು.ಸಭೆಯಲ್ಲಿ ಜೆ.ಜೆ.ಎಂ.ಸಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯವರು, ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು,