ಬೇಸಿಗೆ ಶಿಬಿರದ ಸದುಪಯೋಗ ಪಡಿಸಿಕೊಳ್ಳಿರಿ

ಲಕ್ಷ್ಮೇಶ್ವರ, ಏ3: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ವೀರಣ್ಣ ಪವಾಡದ ಹೇಳಿದರು. ಸಮೀಪದ ಎಸ್.ಎಸ್.ಕೂಡ್ಲಮಠ ಮಾಧ್ಯಮಿಕ ಶಾಲೆಯಲ್ಲಿ ನಡೆದ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೇಸಿಗೆಯ ಕಾಲದಲ್ಲಿ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಅನಾವಶ್ಯಕವಾಗಿ ಹಾಳು ಮಾಡಿಕೊಳ್ಳುತ್ತಾರೆ. ಆದ್ದರಿಂದ ಬೇಸಿಗೆ ಶಿಬಿರದಲ್ಲಿ ಶಿಸ್ತು ಬದ್ದ ಜೀವನ, ಜೀವನಕ್ಕೆ ಉಪಯುಕ್ತವಾಗುವ ಅನುಭವಗಳ ಬಗ್ಗೆ ತಿಳಿಸಿಕೊಡುವುದು. ಟ್ರ್ಯಾಕಿಂಗ್, ಕಷ್ಟ ಸಹಿಷ್ಣುತೆ, ಸ್ವಚ್ಚತೆ, ಸಹ ಜೀವನ ಮುಂತಾದ ಕೌಶಲ್ಯಗಳನ್ನು ತಿಳಿಸಿಕೊಡುವ ಕಾರ್ಯವನ್ನು ಶಿಬಿರದಲ್ಲಿ ತಿಳಿಸಿಕೊಡಲಾಗುವುದು ಎಂದು ಹೇಳಿದರು.
ಈ ವೇಳೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಆರ್.ಕೆ.ಲಮಾಣಿ ಮಾತನಾಡಿ ಬೇಸಿಗೆ ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಎಸ್.ಎಂ.ಮುಳಗುಂದ ಇದ್ದರು. ಆರ್.ಡಿ.ಗೊ<ದಕರ್ ಕಾರ್ಯಕ್ರಮ ನಿರ್ವಹಿಸಿದರು. ಎಸ್.ಎಂ.ಮುಳಗುಂದ ಸ್ವಾಗತಿಸಿ ವಂದಿಸಿದರು.