ಬೇಸಿಗೆ ಶಿಬಿರ ಮಕ್ಕಳ ನೈತಿಕ ಮೌಲ್ಯಗಳನ್ನು ಜಾಗೃತಿಗೊಳಿಸುವ ಸಂತೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.22- ಬೇಸಿಗೆ ರಜೆಯಲ್ಲಿ ಮಕ್ಕಳು ಶಿಬಿರದಲ್ಲಿ ಭಾಗವಹಿಸುವುದರಿಂದ ನೈತಿಕ ಮೌಲ್ಯಗಳು ಜಾಗೃತಿಯಾಗುತ್ತವೆ ಎಂದು ಗ್ರೇಡ್ 2 ತಹಶೀಲ್ದಾರ್ ಗಿರಿಜಾ ಅಭಿಪ್ರಾಯಪಟ್ಟರು.
ಅವರು ನಗರದ ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಚಿಣ್ಣರ ಬೇಸಿಗೆ ಸಂಭ್ರಮದ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಲ್ಲಿ ಕಲಿಸುವ ರಾಜಯೋಗವು ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಮಾಡುವುದರಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಸಂಚಾಲಕಿ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪುರಸ್ಕøತೆ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀ ಜೀ ಮಾತನಾಡಿ ಮಕ್ಕಳು ಬೇಸಿಗೆ ಶಿಬಿರದಲ್ಲಿ ಎಲ್ಲರೊಂದಿಗೆ ಬೆರೆತು ಕಲಿಯುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಮಕ್ಕಳಗೆ ಏಕಾಗ್ರತೆ ಅವಶ್ಯಕ. ಓದುವುದನ್ನೇ ಹವ್ಯಾಸವನ್ನಾಗಿ ಮಾಡಿಕೊಂಡರೆ ಜ್ಞಾನದ ಅರಿವುಂಟಾಗುತ್ತದೆ.
ಮಕ್ಕಳ ದೈನಂದಿನ ಕಲಿಕೆಯ ಜೊತೆಗೆ ಮಕ್ಕಳ ಮನಸ್ಸನ್ನು ವೃದ್ದಿಸುವ ಮತ್ತು ಸಾಂಸ್ಕೃತಿಕ, ಸಾಮಾಜಿಕ, ಬೆಳವಣಿಗೆ ಮೂಡಿಸುವುದು ಬೇಸಿಗೆ ಶಿಬಿರದ ಮುಖ್ಯಜೀವ ಉದ್ದೇಶ ಎಂದರು.
ಮಕ್ಕಳ ಮನೋ ವಿಕಾಸಕ್ಕಾಗಿ ಬೇಸಿಗೆ ಶಿಬಿರಗಳು ಅವಶ್ಯಕವಾಗಿರುವುದರಿಂದ ಸಂಸ್ಥೆಯ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಓಂಶಾಂತಿ ನ್ಯೂಸ್ ಸರ್ವಿಸ್‍ನ ಬಿಕೆ ಆರಾಧ್ಯ, ನಾಗರಾಜ್, ಸುವರ್ಣ, ನಾರಾಯಣ ಹಾಜರಿದ್ದರು.