ಬೈಕ್‌ಗೆ ಬಸ್ ಡಿಕ್ಕಿ: ಸವಾರ ಗಂಭೀರ


ಉಪ್ಪಿನಂಗಡಿ, ನ.೩- ಇಲ್ಲಿನ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಭರತ್ ಕುಮಾರ್ (೧೯) ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.