ಬೈಕ್‌ಗೆ ವಾಹನ ಡಿಕ್ಕಿ,ಸವಾರ ಸಾವು

ರಾಯಚೂರು.ಜ೨೭: ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಿರವಾರ ಪಟ್ಟಣದಲ್ಲಿ ನಡೆದಿದೆ.
ಜಿಲ್ಲೆಯ ಸಿರವಾರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಸಾಕುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಹಿಂಬದಿ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಹಿಂಬದಿ ಸವಾರ ದೇವದುರ್ಗ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಪ್ರಭು ಮಡಿವಾಳ(೧೯) ಗಂಭೀರವಾಗಿ ಗಾಯಗೊಂಡಿದ್ದಾನೆ.