ಬೈಕ್ ಕಳ್ಳನ ಸೆರೆ

ಬೆಂಗಳೂರು, ಮೇ.೪-ನಕಲಿ ಕೀ ಬಳಸಿ ಇಲ್ಲವೇ ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಖತರ್ನಾಕ್ ಖದೀಮನನ್ನು ಚಾಮರಾಜಪೇಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮಕೃಷ್ಣ ಹೆಗ್ಗಡೆನಗರದ ಮುಬಾರಕ್(೨೫) ಬಂಧಿತ ಆರೋಪಿಯಾಗಿದ್ದು,ಆತನಿಂದ ೨.೫೦ ಲಕ್ಷ ಮೌಲ್ಯದ ೪ ದ್ವಿಚಕ್ರವಾಹನಗಳನ್ನು ಜಪ್ತಿಮಾಡಿದ್ದಾರೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಚಾಮರಾಜಪೇಟೆಯ ೧ನೇ ಮುಖ್ಯರಸ್ತೆಯ ಮನೆಯೊಂದರ ಮುಂಭಾಗ ಸುಜುಕಿ ಆಕ್ಸೆಸ್ ದ್ವಿಚಕ್ರ ವಾಹನ ನಿಲ್ಲಿಸಿ ಕೀಯನ್ನು ಬಿಟ್ಟಿದ್ದು,ಅದನ್ನು ಕಳವು ಮಾಡಿದ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಚಾಮರಾಜಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಮಂಜಣ್ಣ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿ
ದ್ದಾರೆ.