ಬೈಕ್ ಗಳಲ್ಲಿ ತ್ರಿಬಲ್ ರೈಡಿಂಗ್: ನಾಲ್ವರ ಸಾವು, ಮತ್ತಿಬ್ಬರಿಗೆ ಗಾಯ

ಕಲಬುರಗಿ: ಎರಡು ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪೂರ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಎರಡೂ ಬೈಕ್’ಗಳಲ್ಲಿ ತಲಾ ಮೂವರು ಪ್ರಯಾಣಿಸಿದ್ದಾಗ ಈ ದುರಂತ ಜರುಗಿದ್ದು, ಮೂವರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದ್ದಾರೆ.

ಲಾಡ್ಲಾಪುರ ಗ್ರಾಮದ ಮರೆಪ್ಪ (50), ಬಸಪ್ಪ (32) ಮತ್ತು ಅಲ್ಲೂರು ಗ್ರಾಮದ ದೇವೇಂದ್ರ (50) ಹಾಗೂ ಮಲ್ಲಪ್ಪ ರಾಯಪ್ಪ (35) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಉಳಿದ ಹನಮಂತ ಹಾಗೂ ಕಾಶಿನಾಥ ಎಂಬುವರು ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.