ಬೈಕ್-ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ವಿಜಯಪುರ,ಜೂ.2: ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ರತ್ನಾಪುರ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ತೊರವಿ ತಾಂಡಾದ ರಾಮು ರಾಠೋಡ ಹಾಗೂ ಕಿಟ್ಟು ಎಂದು ಗುರುತಿಸಲಾಗಿದೆ.
ಈ ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದಾಗ, ವಿಜಯಪುರದಿಂದ ಜತ್ತ ಕಡೆ ಸಾಗುತ್ತಿದ್ದ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿ ಅಸುನೀಗಿದ್ದಾರೆ.
ತಿಕೋಟಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.