ಬೈಕ್-ಲಾರಿ ಡಿಕ್ಕಿ:ಸವಾರ ಸಾವು

ವಿಜಯಪುರ,ಏ 9: ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಯುವ ಬೈಕ್ ಸವಾರನೊಬ್ಬ ಅಸುನೀಗಿರುವ ಘಟನೆ ವಿಜಯಪುರ ನಗರದ ಐಓಸಿ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ.
ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿ ವಿನೋದ ( 25) ಮೃತಪಟ್ಟಿರುವ ಯುವಕ.
ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.