ಬೊಂಡಾಲ ಚಾರಿಟೇಬಲ್ ಟ್ರಸ್ಟ್‌ನಿಂದ ಪೂಂಜರಿಗೆ ನೆರವು

ಮಂಗಳೂರು, ಮಾ.೨೭-ಅನಾರೋಗ್ಯದಿಂದ ಬಳಲುತ್ತಿರುವ ಪ್ರಸಿದ್ಧ ಯಕ್ಷಗಾನ ಭಾಗವತ ಮತ್ತು ಪ್ರಸಂಗಕರ್ತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಚಿಕಿತ್ಸೆಗಾಗಿ  ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ (ರೂ.೨೫,೦೦೦) ಆರ್ಥಿಕ ನೆರವನ್ನು  ನೀಡಲಾಯಿತು. ಮಂಗಳೂರಿನ ಶ್ರೀದುರ್ಗಾ ಫೆಸಿಲಿಟೀಸ್ ಆಡಳಿತ ನಿರ್ದೇಶಕ ಹಾಗೂ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಭಾಗವತರಿಗೆ ನಿಧಿ ಸಮರ್ಪಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಪೂಂಜರ ಪತ್ನಿ ಶ್ರೀಮತಿ ಶೋಭಾ ಪೂಂಜ ಉಪಸ್ಥಿತರಿದ್ದರು.