ಬೊಳ್ಳಾಜೆಯಲ್ಲಿ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

ಸುಳ್ಯ, ಎ.೨೭-ನೆಲ್ಲೂರು ಕೆಮ್ರಾಜೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಕೊರತ್ತೋಡಿ ಇದರ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯು ಬೊಳ್ಳಾಜೆ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು.
ಸುಳ್ಯ ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮುಂಡೋಕಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ, ಬೊಳ್ಳಾಜೆ ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮಾಸ್ತರ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಎ.ವಿ., ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುತ್ತಿಗಾರು ವಲಯಾಧ್ಯಕ್ಷ ಭಾಸ್ಕರ ರಾವ್ ಚೆನ್ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇಣುಗೋಪಾಲ ತುಂಬೆತ್ತಡ್ಕ ಸ್ವಾಗತಿಸಿ, ಚರಣ್ ಕೊರತ್ತೋಡಿ ವಂದಿಸಿದರು.