ಬೋಗಿಗೆ ಬೆಂಕಿ ಪ್ರಯಾಣಿಕರು ಪಾರು

ನೌಪಾದಾ(ಒಡಿಶಾ),ಜೂ.೯-ಜಿಲ್ಲೆಯ ದುರ್ಗ್ ಪುರಿ ಎಕ್ಸ್‌ಪ್ರೆಸ್‌ನ ಬೋಗಿಯೊಳಗೆ ನಿನ್ನೆ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ.
ರೈಲಿನ ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಹತ್ತಿಕೊಂಡಿತು. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಸೀಮಿತವಾಗಿದೆ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ರೈಲು ರಿಯಾರ್ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ೩ ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿದರು ಮತ್ತು ರೈಲು ರಾತ್ರಿ ೧೧ ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು ಬಹುತೇಕ ಮಂದಿ ಭಯಭೀತರಾಗಿದ್ದರು.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತವು ೨೮೮ ಜನರನ್ನು ಬಲಿತೆಗೆದುಕೊಂಡಿದೆ ಮತ್ತು ೧,೧೦೦ ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದು ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳಿಗೆ ಭಾರಿ ಹಾನಿಯಾಗಿತ್ತು.