ದೇವದುರ್ಗ,ಜೂ.೧೧-
ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪೂರಿ ಒತ್ತಾಯಿಸಿದರು.
ಪತ್ರಿಕಾಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೋಸರಾಜ ಹಿರಿಯ ರಾಜಕಾರಣಿ ಜಿಲ್ಲೆಯ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅವರಿ ಜಿಲ್ಲೆಯ ಉಸ್ತುವಾರಿ ನೀಡಿದರೆ ಅಭಿವೃದ್ಧಿಗೆ ಒತ್ತು ನೀಡುತ್ತಾರೆ. ಹಿಂದೆ ಸಚಿವ ಶರಣಪ್ರಕಾಶ ಪಾಟೀಲ್‌ರಿಗೆ ಉಸ್ತುವಾರಿ ನೀಡಿದ್ದರೂ, ಯಾವುದೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡದೆ ಧ್ವಜ ಹಾರಿಸಲು ಮಾತ್ರ ಸೀಮಿತರಾಗಿದ್ದರು. ಅವರಿಗೆ ಮತ್ತೇ ಜಿಲ್ಲಾ ಉಸ್ತುವಾರಿ ನೀಡಿರುವದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂದು ಹೇಳಿದರು.
ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ರಾಯಚೂರಿಗೆ ಐಐಟಿ ನೀಡುವುದಾಗಿ ಹೇಳಿ ಧಾರವಾಡಕ್ಕೆ ಮಂಜೂರು ಮಾಡಿಸಿ ಅನ್ಯಾಯವೆಸಿಗಿದ್ದರು. ಏಮ್ಸ್‌ಗಾಗಿ ೪೦೦ ದಿನಗಳಿಂದ ಹೋರಾಟ ನಡೆಯುತ್ತಿದೆ. ಶರಣಪ್ರಕಾಶ ಪಾಟೀಲ್ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡುತ್ತಿದಂತೆ ಏಮ್ಸ್ ಕಲಬುರಗಿಯಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿಕೆ ನೀಡಿರುವುದ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಬಗ್ಗೆ ಕಳಕಳಿ ಇಲ್ಲದ ಶರಣಪ್ರಕಾಶ ಪಾಟೀಲ್ ಅವರನ್ನು ಬದಲಾಯಿಸಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿರುವ ಎನ್.ಎಸ್.ಬೋಸರಾಜ ಅವರಿಗೆ ಜಿಲ್ಲೆಯ ಉಸ್ತುವಾರಿ ಹೊಣೆ ನೀಡಬೇಕು ಒಂದೊಮ್ಮೆ ಸರ್ಕಾರ ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೌನೇಶ ಗಾಣಧಾಳ, ಭೀಮರಾಯ ಭಂಡಾರಿ, ಮೌನೇಶ ಚಪ್ಪಳಕಿ, ಗುರಪ್ಪ ಇದ್ದರು.