ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಚಿತ್ರದ ಪೋಸ್ಟರ್  ಅನಾವರಣ

ದಿಯಾ ಚಿತ್ರದ ಖ್ಯಾತಿಯ ದೀಕ್ಷಿತ್ ಶೆಟ್ಟಿ ಮತ್ತು ಬೃಂದಾ ಆಚಾರ್ಯ ನಾಯಕ ನಾಯಕಿಯಾಗಿರುವ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ 5 ನೇ ಚಿತ್ರ ಇದು. ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ

ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಒ ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ `ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, `ಬಹುಪರಾಕ್’ ಮತ್ತು `ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಸಂಕಲನ ಮಾಡಿದ ಅನುಭವ ಇವರಿಗಿದೆ.

ಬ್ಯಾಂಕ್‍ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ

ಬೆಂಗಳೂರು, ತುಮಕೂರು ಹಾಗು ಚಿತ್ರದುರ್ಗ ಸುತ್ತ 80 ಪ್ರತಿಶತ ಚಿತ್ರೀಕರಣ ಮುಗಿದಿದೆ.  ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ.  ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಜ್ಯೂಡಾ ಸ್ಯಾಂಡಿ ಸಂಗೀತ,ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ,ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಚಿತ್ರಕ್ಕಿದೆ.