ಬ್ಯಾಕ್ ಹುದ್ದೆಗಳ ಭರ್ತಿಗೆ ಆಗ್ರಹ

ಬಂಗಾರಪೇಟೆ.ಜು೧೧:ರಾಜ್ಯಾದ್ಯಂತ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗಗಳ ಬ್ಯಾಕ್ ಲಾಗ್ ಹುದ್ದೆಗಳನ್ನು ಸರ್ಕಾರ ಕೂಡಲೇ ಭರ್ತಿ ಮಾಡಬೇಕೆಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿ ಮುಂದೆ ಉಪತಹಶೀಲ್ದಾರ್ ಚಂದ್ರಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡುತ್ತಾ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕೆಂದು ಕಾನೂನಿನಲ್ಲಿ ಆದೇಶವಿದೆ, ಹಾಗಾಗಿ ರಾಜ್ಯಾದ್ಯಂತ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಮುಂದುವರಿಯುತ್ತಾರೆ ಎಂದು ಹೇಳಿದರು.
ದೇಶದ ಕಟ್ಟ ಕಡೆ ವ್ಯಕ್ತಿಗೂ ಶಿಕ್ಷಣ ಮತ್ತು ಉದ್ಯೋಗ ಸಿಗಬೇಕೆಂಬುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸಾಗಿತ್ತು, ಆದಕಾರಣ ಇದೀಗ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ರಾಜ್ಯದಲ್ಲಿನ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಈ ಮೂಲಕ ಸರ್ಕಾರಕ್ಕೆ ಮನವಿ ಮತ್ತು ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.
ಸಂಘಟನೆಯ ಅಯ್ಯಪ್ಪ, ರವಿಚಂದ್ರ ವೆಂಕಟೇಶ್, ಕರ್ಣ,ಶಿವಕುಮಾರ್, ಗೌತಮ್, ಮನೋಜ್,ಮಂಜು, ಧನರಾಜ್,ಸುಭಾಷ್ ಇದ್ದರು.