ಬ್ಯಾಟರಾಯಗೌಡ ಚಿನ್ನದ ಪದಕ ಪ್ರಶಸ್ತಿಗೆ ಆಯ್ಕೆ

ಕೆ.ಆರ್.ಪೇಟೆ.ಮಾ.25: ಪಟ್ಟಣದ ಪೆÇಲೀಸ್ ಠಾಣೆಯ ಪಿಎಸ್‍ಐ ಬಿ.ಪಿ.ಬ್ಯಾಟರಾಯಗೌಡ ಅವರು 2020-21 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಪಿಎಸ್‍ಐ ಬ್ಯಾಟರಾಯಗೌಡ ಆಗಿದ್ದು ಇವರೊಂದಿಗೆ ನಾಗಮಂಗಲ ಉಪವಿಭಾಗದ ಡಿವೈಎಸ್‍ಪಿ ನವೀನ್‍ಕುಮಾರ್ ಪ್ರಶಸ್ತಿಗೆ ಬಾಜನರಾಗಿರುವುದಕ್ಕೆ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ 2020-21 ನೇ ಸಾಲಿನಲ್ಲಿ ಇಲಾಖೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ತೋರಿದ ಫಲವಾಗಿ ಬ್ಯಾಟರಾಯಗೌಡರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಒಲಿದು ಬಂದಿದ್ದು ಲಾಕ್ ಡೌನ್ ಸಮಯದಲ್ಲಿ ಉತ್ತಮ ನಿರ್ವಹಣೆ, ಪಟ್ಟಣ ಹಾಗೂ ನಗರ ಪ್ರದೇಶದ ಜನರಿಗೆ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಢಿಸಿದ್ದರು, ಪಟ್ಟಣದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರು, ಪಟ್ಟಣದ ಸಾರ್ವಜನಿಕರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳುವ ವೇಳೆ ಪೆÇಲೀಸ್ ಇಲಾಖೆಗೆ ಮಾಹಿತಿ ತಿಳಿಸಿದರೆ ಅವರುಗಳಿಗೆ ಉಚಿತವಾಗಿ ಮೋಷನ್ ಡಿಡೆಕ್ಷನ್ ಕ್ಯಾಮರಾಗಳನ್ನು ಅಳವಡಿಸಿಕೊಟ್ಟಿದ್ದರು, ಇದರಿಂದಾಗಿ ಶಾಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಕಳ್ಳತನದ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದವು.
ಈ ಹಿಂದೆ ಬ್ಯಾಟರಾಯಗೌಡ ರವರು ಕೆ.ಆರ್.ಎಸ್. ಠಾಣೆ, ಮಂಡ್ಯ ಪಶ್ಚಿಮ ಪೆÇಲೀಸ್ ಠಾಣೆ, ಬೆಳ್ಳೂರು ಠಾಣೆ, ಸಕಲೇಶಪುರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಅಲ್ಲಿಯೂ ಅತ್ಯುತ್ತಮ ನಿರ್ವಹಣೆ ತೋರಿಸಿರುತ್ತಾರೆ. ಪ್ರಸ್ತುತ ಕೆ.ಆರ್.ಪೇಟೆ ಪಟ್ಟಣಠಾಣೆಗೆ ಬಂದು ಒಂದು ವರ್ಷ ನಾಲ್ಕು ತಿಂಗಳುಗಳಿಂದ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಅನೈತಿಕ ಚಟುವಟಿಕೆ ನಡೆಸುವವರಿಗೆ ಹಾಗೂ ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದಾರೆ.
ಆರಕ್ಷಕಸುದ್ದಿ ಪತ್ರಿಕೆಯು ಇವರ ಸಾಧನೆಯನ್ನು ಗುರುತಿಸಿ ಇವರಿಗೆ ಆರಕ್ಷಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಅಲ್ಲದೆ ವಿವಿಧ ಸಂಘ ಸಂಸ್ಥೆಗಳು ಹಲವಾರು ಪ್ರಶಸ್ತಿ, ಪರಸ್ಕಾರಗಳನ್ನು ನೀಡಿ ಸನ್ಮಾನಿಸಿವೆ. ಬ್ಯಾಟರಾಯಗೌಡರಿಗೆ ಇನ್ನಷ್ಟು ಪ್ರಶಸ್ತಿಗಳು ಒಲಿದುಬರಲಿ, ಇಲಾಖೆಯಲ್ಲಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಶ್ರೇಷ್ಠ ನಿರ್ವಹಣೆ ತೋರಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.