ಬ್ಯಾಡಗಿ,ಎ.22: ರಾತ್ರಿ ಕಫ್ರ್ಯೂ, ವೀಕೆಂಡ್ ಕಫ್ರ್ಯೂ, ಜಾರಿ


ರಾಜ್ಯದಲ್ಲಿ ಕೊರೊನಾ ಎರಡನೇ ಹಂತದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ವೀಕೆಂಡ್ ಕಪ್ರ್ಯೂ ಹಾಗೂ ನೈಟ್ ಕಪ್ರ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅದರಂತೆ ತಾಲೂಕಿನಾದ್ಯಂತ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕಪ್ರ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕಪ್ರ್ಯೂ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ ರವಿಕುಮಾರ ಕೊರವರ ತಿಳಿಸಿದ್ದಾರೆ.

ಸ್ಥಳೀಯ ತಾಲೂಕಾ ಕಚೇರಿಯ ಸಭಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳವರೆಗೆ ವೀಕ್ ಎಂಡ್ ಕಪ್ರ್ಯೂ ಜಾರಿಗೊಳಿಸಲಾಗಿದ್ದು, ತಾಲೂಕಿನಲ್ಲಿ ಜಾರಿಗೆ ಬರಲಿದೆ. ಇದರ ಜೊತೆ ಸೆ 144 ಸಿ ಕಾಯಿದೆಯನ್ನು ಜಾರಿಗೆ ಮಾಡಲಾಗಿದೆ. ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‍ಡೌನ್ ಜಾರಿಯಾಗಿದ್ದು, ಅನಗತ್ಯವಾಗಿ ಯಾರೂ ಹೊರಗೆ ಬರುವಂತಿಲ್ಲ ಎಂದು ಹೇಳಿದರಲ್ಲದೇ, ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಕೊರೋನಾ ಜಾಗೃತಿ ಸಮಿತಿಯನ್ನು ರಚಿಸಲಾಗಿದ್ದು, ತಾಲೂಕಿನಲ್ಲಿ ಕೋವಿಡ್ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ ಜಾತ್ರೆ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲಿ ಜನರಿಗೆ ಅವಕಾಶವಿಲ್ಲ. ಹೋಟೆಲ್, ಬಾರ್’ಗಳಲ್ಲಿ ಪಾರ್ಸಲ್ ತೆಗೆದುಕೊಂಡು ಹೋಗುವುದಕ್ಕೆ ಮಾತ್ರ ಅವಕಾಶವಿದ್ದು, ಕುಡಿಯೋಕೆ ಅವಕಾಶ ಇರುವುದಿಲ್ಲ. ರಾಜಕೀಯ ಸಭೆ, ಸಮಾವೇಶ ಹಾಗೂ ಪ್ರತಿಭಟನೆ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಸಿಪಿಐ ಬಸವರಾಜ ಮಾತನಾಡಿ, ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ವ್ಯಾಪಾರಕ್ಕೆ ಬರುವ ರೈತರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಲು ಕ್ರಮ ವಹಿಸುವಂತೆ ಎಪಿಎಂಸಿ ಕಾರ್ಯದರ್ಶಿಗೆ ಸೂಚಿಸಲಾಗಿದ್ದು, ಮಾರುಕಟ್ಟೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದ್ದು, ಕಂದಾಯ, ಪುರಸಭೆ ಮತ್ತು ಪೆÇೀಲಿಸ್ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ ಪಟ್ಟಣದಲ್ಲಿ ಮಾಸ್ಕ್ ಧರಿಸದೇ ಇರುವ ಜನರಿಗೆ 100ರೂಗಳನ್ನು ದಂಡವನ್ನು ವಿಧಿಸಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಈವರೆಗೂ 176ಜನರಿಗೆ ದಂಡ ವಿಧಿಸಲಾಗಿದ್ದು, 17600 ರೂಗಳನ್ನು ವಸೂಲಿ ಮಾಡಲಾಗಿದೆ. ಸಾರ್ವಜನಿಕರು ಅನಗತ್ಯ ದಂಡಕ್ಕೆ ಒಳಗಾಗದೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕೆಂದು ಹೇಳಿದರು.

ಬುಧವಾರ ಮಾತ್ರ ಸಂತೆ..!!
ಪುರಸಭೆ ಮುಖ್ಯಾಧಿಕಾರಿ ವಿ.ಎಂ.ಪೂಜಾರ ಮಾತನಾಡಿ, ಪಟ್ಟಣದಲ್ಲಿ ವಾರಾಂತ್ಯದ ಶನಿವಾರದಂದು ಕೋವಿಡ್ ವೀಕೆಂಡ್ ಕಫ್ರ್ಯೂ ಹಿನ್ನಲೆಯಲ್ಲಿ ಸಂತೆಯನ್ನು ರದ್ದು ಗೊಳಿಸಲಾಗಿದೆ. ಪ್ರತಿ ಬುಧವಾರ ಎಂದಿನಂತೆ ಸಂತೆಯು ನಡೆಯಲಿದ್ದು, ಸಾರ್ವಜನಿಕರು ಅಂದು ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಂತೆಯಲ್ಲಿ ಪಾಲ್ಗೊಂಡು ತಮ್ಮ ಅಗತ್ಯ ತರಕಾರಿ ಹಾಗೂ ಇತರ ವಸ್ತುಗಳನ್ನು ಕೊಂಡುಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ. ಸುಹಿಲ್ ಹರವಿ, ಸಮಾಜ ಕಲ್ಯಾಣಾಧಿಕಾರಿ ಎಚ್. ಟಿ.ಲಮಾಣಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅಶೋಕ ಕುರುಬರ, ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎನ್ ತಿಮ್ಮಾರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.