ಬ್ಯಾಡಗಿ: ಮಾ.14 ರಂದು ಪ್ರಜಾಧ್ವನಿ ಯಾತ್ರೆ

ಬ್ಯಾಡಗಿ,ಮಾ13: ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಮಾರ್ಚ್ 14ರಂದು ಮಧ್ಯಾಹ್ನ 2ಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವು ಜರುಗಲಿದ್ದು, ಕ್ಷೇತ್ರದ ಎಲ್ಲಾ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕಿನಲ್ಲಿ ಬೆಳಕು ತರಬೇಕು ಎಂಬ ಉದ್ದೇಶದಿಂದ ಗೃಹಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಇದರಿಂದ ಪ್ರತಿ ತಿಂಗಳು 1500 ರೂ. ಉಳಿತಾಯವಾಗುತ್ತದೆ. ಇನ್ನು ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪೆÇ್ರೀತ್ಸಾಹ ಧನ ನೀಡಲು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ್ದೇವೆ. ಈ ಎರಡು ಯೋಜನೆ ಮೂಲಕ ವರ್ಷಕ್ಕೆ 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷದಷ್ಟು ಆರ್ಥಿಕ ಶಕ್ತಿ ತುಂಬಲಾಗುವುದು. ಈ ಗ್ಯಾರಂಟಿ ಯೋಜನೆಗಳಿಗೆ ನಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರುಗಳ ಸಹಿ ಹಾಕಿಸಿ ಗ್ಯಾರಂಟಿ ಕಾರ್ಡ್ ನೀಡಲಾಗುವುದು ಎಂದರು.
ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಇದ್ದಾಗ ಅನ್ನಭಾಗ್ಯ ಯೋಜನೆ, ರೈತರಿಗೆ 7 ತಾಸು ವಿದ್ಯುತ್. ಹಾಲು ಉತ್ಪಾದಕರಿಗೆ 5 ರೂ. ಪೆÇ್ರೀತ್ಸಾಹ ಧನ, ಶಾಲಾ ಮಕ್ಕಳಿಗೆ ಬಿಸಿಯೂಟ ಹಾಗುವ ಶೂ, ಸಾಕ್ಸ್ ಯೋಜನೆ, ಮಹಿಳೆಯರಿಗೆ ಶಕ್ತಿ ತುಂಬಲು ಸ್ತ್ರೀಶಕ್ತಿ ಸಂಘಗಳಿಗೆ ಉತ್ತೇಜನ ನೀಡಲಾಯಿತು ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದವರಿಗೆ ಜಮೀನು ನೀಡುವ ಕಾನೂನು ತಿದ್ದುಪಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅಧಿಕಾರಾವಧಿಯಲ್ಲಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಬೆಳಕು ಚೆಲ್ಲಿದರಲ್ಲದೇ, ರಾಜ್ಯದ ಜನತೆಗೆ ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ದಂತಹ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುವ ಕಾಂಗ್ರೆಸ್ ಪಕ್ಷಕ್ಕೆ ಕ್ಷೇತ್ರದ ಮತದಾರರು ಅಧಿಕಾರ ನೀಡಿ ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ಅಧಿಕಾರಕ್ಕೆ ತರಲು ಮುಂದಾಗಬೇಕೆಂದು ಕರೆ ನೀಡಿದರು.