ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ, ಮಾ.೩೦-ಭಾರತೀಯ ಸೇನೆಯು ತನ್ನ ಸೇನಾ ಸಾಮರ್ಥ್ಯ ಪ್ರದರ್ಶನ ಮಾಡಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಯನ್ನು ಉಡಾವಣೆ ಮಾಡಿ ಪರೀಕ್ಷೆ ನಡೆಸಲಾಗಿದೆ.
ರೈಸಿಂಗ್ ಸನ್ ಬ್ರಹ್ಮೋಸ್ ಯೋಧರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು, ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ನಿಖರತೆ, ಶಕ್ತಿ ಹಾಗೂ ಭಾರತೀಯ ಸೇನೆಯ ಬದ್ಧತೆಯನ್ನು ಸಾರುತ್ತದೆ ಎಂದು ಸೇನೆ ಹೇಳಿದೆ. ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಭಾರತದ ಸಾರ್ವಭೌಮತ್ವವನ್ನು ರಕ್ಷಣೆ ಮತ್ತು ಪ್ರಾದೇಶಿಕ ಸಾಮರ್ಥ್ಯ ಹಾಗೂ ಸೇನಾ ಬಲಪ್ರದರ್ಶನದ ಪ್ರತೀಕವಾಗಿದೆ.ಅಲ್ಲದೆ, ಬ್ರಹ್ಮೋಸ್ ಕ್ಷಿಪಣಿ, ವಿಶ್ವದ ಅತ್ಯಂತ ವೇಗದ ಕ್ರೂಸ್ ಕ್ಷಿಪಣಿಗಳಲ್ಲಿ ಒಂದಾದ ಮ್ಯಾಕ್ ೩ರ ವೇಗವನ್ನು ಹೊಂದಿದೆ ಎಂದು ಸೇನೆ ಹೇಳಿದೆ.